×
Ad

ತೆಂಕನಿಡಿಯೂರು: ಬೃಹತ್ ರಕ್ತದಾನ ಶಿಬಿರ

Update: 2019-08-31 22:46 IST

ಉಡುಪಿ, ಆ.31: ಯುವ ಜನತೆ ಆಧುನಿಕ ಕಾಲಘಟ್ಟದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳುವುದು ಶ್ಲಾಘನೀಯ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.

ಇತ್ತೀಚೆಗೆ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಮಲ್ಪೆ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲ್ಪಾಡಿ, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್, ಕೆಎಂಸಿಯ ರಕ್ತನಿಧಿ, ಸ್ವಚ್ಚಭಾರತ್ ಫ್ರೆಂಡ್ಸ್ ಉಡುಪಿ, ಸ್ಪೋರ್ಟ್ಸ್ ಕ್ಲಬ್ ಇವುಗಳ ಸಹಯೋಗದೊಂದಿಗೆ ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ತೆಂಕನಿಡಿಯೂರು ಕಾಲೇಜಿನ ಸಭಾಂಗಣದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉ್ಘಾಟಿಸಿ ಅವರು ಮಾತನಾಡುತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಮೊಗವೀರ ಯುವ ಸಂಘಟನೆ ಅಧ್ಯಕ್ಷ ವಿನಯ ಕರ್ಕೇರಾ, ಮಲ್ಪೆ ಘಟಕದ ಅಧ್ಯಕ್ಷ ದಿನಕರ ಮೆಂಡನ್, ನಗರಸಭಾ ಸದಸ್ಯ ವಿಜಯ ಕೊಡವೂರು, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೇಟಿಕ್‌ನ ಅಸೋಸಿಯೇಶನ್ ಅಧ್ಯಕ್ಷ ರಘುರಾಮ ನಾಯಕ್, ಎಚ್‌ಡಿಎಫ್‌ಸಿ ಬ್ಯಾಂಕಿನ ಮ್ಯಾನೇಜರ್ ಪ್ರಸನ್ನ ಕುಮಾರ್, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಕೃಷ್ಣಾನಂದ ಮಲ್ಪೆ, ಕೆಂಎಂಸಿ ರಕ್ತ ನಿಧಿಯ ನಿರ್ದೇಶಕ ಡಾ. ಶಮ್ಮಿ ಶಾಸ್ತ್ರೀ, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್‌ನ ಗೌರವಾಧ್ಯಕ್ಷ ಶಶಿರಾಜ್ ಕುಂದರ್ ಉಪಸ್ಥಿತರಿದ್ದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಮಚಂದ್ರ ಪಾಟ್ಕರ್ ಸ್ವಾಗತಿಸಿ, ದಯಾನಂದ ಯು. ವಂದಿಸಿದರು. ಶಿಬಿರದಲ್ಲಿ ಒಟ್ಟು 145 ಯೂನಿ್ ರಕ್ತವನ್ನು ಸಂಗ್ರಹಿಸಲಾಯಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News