ಹುಬ್ಬಳ್ಳಿ ಟೈಗರ್ಸ್ ಕೆಪಿಎಲ್ ಚಾಂಪಿಯನ್
Update: 2019-08-31 23:18 IST
ಮೈಸೂರು, ಆ.31: ಕರ್ನಾಟಕ ಪ್ರೀಮಿಯರ್ ಲೀಗ್ ಟ್ವೆಂಟಿ-20 ಟೂರ್ನಿಯ ಫೈನಲ್‌ನಲ್ಲಿ ಬಳ್ಳಾರಿ ಟಸ್ಕರ್ಸ್‌ನ್ನು 8 ರನ್‌ಗಳ ಅಂತರದಿಂದ ಬಗ್ಗು ಬಡಿದ ಹುಬ್ಬಳ್ಳಿ ಟೈಗರ್ಸ್ ನೂತನ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
ಇಲ್ಲಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಫೈನಲ್‌ನಲ್ಲಿ ಗೆಲುವಿಗೆ 153 ರನ್‌ಗಳ ಸವಾಲನ್ನು ಪಡೆದ ಬಳ್ಲಾರಿ ಟಸ್ಕರ‍್ಸ್ ತಂಡ 20 ಓವರ್‌ಗಳಲ್ಲಿ 144 ರನ್‌ಗಳಿಗೆ ಆಲೌಟಾಗಿದೆ.