ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ ನಿರ್ಲಕ್ಷ ತೋರುವುದಿಲ್ಲ: ಗೋವಿಂದ ಕಾರಜೋಳ

Update: 2019-08-31 18:54 GMT

ಹುಬ್ಬಳ್ಳಿ, ಆ.31: ರಾಜ್ಯ ಸರಕಾರ ರಾಜ್ಯದಲ್ಲಿನ ನೆರೆ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ಯಾವುದೇ ನಿರ್ಲಕ್ಷ ತೋರುವುದಿಲ್ಲವೆಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಈ ಬಗ್ಗೆ ಈಗಾಗಲೇ ಕೇಂದ್ರದಿಂದ ಪರಿಶೀಲನಾ ತಂಡ ವರದಿಯೊಂದನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿದೆ. ಈ ವರದಿಯನ್ನು ಆಧರಿಸಿ ಕೂಡಲೇ ಅನುದಾನ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಬಾಗಲಕೋಟೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ನೆರೆಹಾವಳಿಗೆ ತುತ್ತಾದ ಪ್ರದೇಶಗಳ ಪರಿಶೀಲನೆ ನಡೆಸುತ್ತೇನೆ. ಮುಂದಿನ ಎರಡು ದಿನ ಇಲ್ಲಿಯೆ ಇದ್ದು, ಜಿಲ್ಲೆಯಲ್ಲಿ ಸಂಭವಿಸಿದ ನಷ್ಟಗಳ ಕುರಿತು ಸಂಪೂರ್ಣ ಮಾಹಿತಿ ಪಡೆಯುತ್ತೇನೆಂದು ಅವರು ಹೇಳಿದರು.
ಬಾಗಲಕೋಟೆ ಜಿಲ್ಲೆಯಲ್ಲಿ ರಸ್ತೆ, ಸೇತುವೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಅಪರ ಪ್ರಮಾಣದಲ್ಲಿ ನಷ್ಟವಾಗಿದೆ. ಇವುಗಳ ಪುನರ್ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಇದಕ್ಕಾಗಿ 500ಕೋಟಿ ರೂ.ಮೀಸಲಿಡಲಾಗುತ್ತಿದೆ. ಬಾಗಲಕೋಟೆ ಪ್ರವಾಸದ ನಂತರ ಮೈಸೂರು, ಮಂಗಳೂರು, ಕೊಡಗು ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದೇನೆಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಸೆ.7ಕ್ಕೆ ಬೆಂಗಳೂರಿಗೆ ಭೇಟಿ ನೀಡಲಿದ್ದು, ಆ ಸಂದರ್ಭದಲ್ಲಿ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದ ಸಂಪೂರ್ಣ ವಿವರಗಳ ಕುರಿತು ಮನವರಿಕೆ ಮಾಡಲಾಗುವುದು. ಈಗಾಗಲೇ ಅವರು ಕೇಂದ್ರದಿಂದ ನೆರೆ ಅಧ್ಯಯನ ತಂಡವನ್ನು ಕಳುಹಿಸಿ ವರದಿ ತರಿಸಿಕೊಂಡಿದ್ದಾರೆ. ಹೀಗಾಗಿ ನಮ್ಮ ನಿರೀಕ್ಷೆಗೂ ಮೀರಿಅನುದಾನ ಬಿಡುಗಡೆಗೊಳಿಸಲಿದ್ದಾರೆ.
-ಗೋವಿಂದ ಕಾರಜೋಳ, ಉಪಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News