ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

Update: 2019-09-01 10:58 GMT

ರಾಂಚಿ,ಸೆ.1: ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರ ಕಿಡ್ನಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ ತಜ್ಞ ವೈದ್ಯರು ತಿಳಿಸಿದ್ದಾರೆ.

 ಕಿಡ್ನಿ ಸೋಂಕಿನಿಂದ ಬಳಲುತ್ತಿರುವ ಲಾಲೂ ಅವರ ಎರಡೂ ಕಿಡ್ನಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಜಿಎಫ್‌ಆರ್ ಸ್ಥಗಿತಗೊಂಡಿದೆ. ರಕ್ತದೊತ್ತಡ ಹಾಗೂ ಮಧುಮೇಹದ ಪ್ರಮಾಣವೂ ಏರುಪೇರಾಗುತ್ತಿದೆ. ಹೀಗಾಗಿ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿಲ್ಲ. ಸ್ಥಿತಿ ಗಂಭೀರವಾಗಿದೆ ಎಂದು ಲಾಲೂ ಆರೋಗ್ಯ ನೋಡಿಕೊಳ್ಳುತ್ತಿರುವ ಡಾ.ಉಮೇಶ್ ಯಾದವ್ ತಿಳಿಸಿದ್ದಾರೆ.

 71 ವರ್ಷದ ಪ್ರಸಾದ್ ಜಾರ್ಖಂಡ್‌ನ ರಾಂಚಿಯಲ್ಲಿರುವ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ರಾಂಚಿಗೆ ಭೇಟಿ ನೀಡಿರುವ ಲಾಲೂ ಪ್ರಸಾದ್ ಪುತ್ರ ತೇಜಸ್ವಿ ಯಾದವ್ ತಂಧೆಯ ಆರೋಗ್ಯ ವಿಚಾರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News