×
Ad

ಶಿವಮೊಗ್ಗ: ಅತ್ಯಾಚಾರ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ

Update: 2019-09-01 17:33 IST

ಶಿವಮೊಗ್ಗ, ಸೆ. 1: ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ತದನಂತರ ವಿವಾಹವಾಗಲು ನಿರಾಕರಿಸಿದ ಯುವಕನಿಗೆ ಶಿವಮೊಗ್ಗ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು 7 ವರ್ಷಗಳ ಕಠಿಣ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. 

ಶಿವಮೊಗ್ಗ ತಾಲ್ಲೂಕಿನ ಸೋಗಾನೆ ಗ್ರಾಮದ ತಿಪ್ಪೇಶ್ (27) ಶಿಕ್ಷೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಈತ ಅದೇ ಗ್ರಾಮದ ಯುವತಿಯೊಂದಿಗೆ ಪ್ರೇಮ ಸಂಬಂಧ ಇರಿಸಿಕೊಂಡು ವಂಚಿಸಿದ್ದ. 

ಈ ಯುವತಿಯು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎ.ಎಂ ಸುರೇಶ್ ಕುಮಾರ್‍ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News