ಡಿಸೆಂಬರ್‌ನಲ್ಲಿ ಚುನಾವಣೆ ಸಾಧ್ಯತೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2019-09-01 13:06 GMT

ಬೆಂಗಳೂರು, ಸೆ. 1: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರವನ್ನು ನೋಡಿದರೆ ಹೆಚ್ಚುದಿನ ನಿಲ್ಲುವ ಹಾಗೆ ಕಾಣುತ್ತಿಲ್ಲ. ಅದಕ್ಕೆ ಡಿಸೆಂಬರ್‌ಗೆ ಸಾರ್ವತ್ರಿಕ ಚುನಾವಣೆ ಬರುತ್ತೆ, ಸಿದ್ಧರಾಗಿ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ಉಪಚುನಾವಣೆಗೆ ತಯಾರಾಗಿದ್ದೇವೆ. ಮಧ್ಯಂತರ ಚುನಾವಣೆಗೂ ತಯಾರಾಗಿ ಎಂದು ನಿನ್ನೆ ಮಂಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ನಮ್ಮ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

‘ರಾಜ್ಯ ಸರಕಾರ ಪ್ರವಾಹ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಸಂತ್ರಸ್ತರಿಗೆ 10 ಸಾವಿರ ರೂ.ಪರಿಹಾರ ನೀಡುತ್ತಿದ್ದಾರೆ. ಅದು ಸಾಲದು, ಕನಿಷ್ಠ 1ಲಕ್ಷ ರೂ.ಪರಿಹಾರ ನೀಡಬೇಕು. ಬರೀ ಭಾಷಣ ಮಾಡುವುದರಿಂದ ಸಂತ್ರಸ್ತರ ಕಷ್ಟ ದೂರವಾಗಲ್ಲ, ಸೂಕ್ತ ಪರಿಹಾರ ನೀಡಿ, ಪುನರ್ವಸತಿ ಕಲ್ಪಿಸಲಿ. ಇದು ಸರಕಾರದ ಕರ್ತವ್ಯ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

‘ಅನರ್ಹ ಶಾಸಕ ಎಂಟಿಬಿ ನಾಗರಾಜ್ ಟೀಕೆಗೆ ನಾನು ಹೆಚ್ಚಿನ ಮಹತ್ವ ನೀಡುವುದಿಲ್ಲ. ಒಂದು ಸಾರಿ ನಾನು ಹೃದಯದಲ್ಲಿ ಇದ್ದೀನಿ ಎನ್ನುತ್ತಾರೆ, ಆಮೇಲೆ ನನ್ನನ್ನೇ ಟೀಕೆ ಮಾಡುತ್ತಾರೆ. ನನ್ನ ಜೊತೆಯಲ್ಲೇ ಇದ್ದು ನನಗೆ ದ್ರೋಹ ಮಾಡಿದ್ದಾರೆ, ಇಂಥವರ ನಾಟಕಗಳಿಗೆ ಜನರೇ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ನನಗಿದೆ’
-ಸಿದ್ಧರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News