ಮಂಗಳೂರು: ತನಿಖಾ ಸಂಸ್ಥೆ ಹೆಸರು ಬಳಸಿ ದರೋಡೆಗೆ ಯತ್ನ; ಆರೋಪಿಗಳಿಗೆ ನ್ಯಾಯಾಂಗ ಬಂಧನ
Update: 2019-09-01 20:28 IST
ಮಂಗಳೂರು, ಸೆ.1: ಕೇಂದ್ರ ತನಿಖಾ ಸಂಸ್ಥೆಯ ಹೆಸರು ಬಳಸಿ ದರೋಡೆಗೆ ಯತ್ನಿಸಿದ ಮತ್ತಿಬ್ಬರು ಆರೋಪಿಗಳಾದ ಬೆಂಗಳೂರು ನಾಗರಬಾವಿ ನಿವಾಸಿ ನಾಗರಾಜ, ರಾಘವೇಂದ್ರ ಎಂಬವರನ್ನು ನ್ಯಾಯಾಲಯಕ್ಕೆ ರವಿವಾರ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಗಳು ಹಲವರಿಗೆ ವಂಚನೆ ಮಾಡಿದ್ದಲ್ಲದೆ, ವಿಧಾನ ಪರಿಷತ್ ಸದಸ್ಯ ಮನೋಹರ್ ಅವರ ವಿಧಾನಸೌಧ ವಾಹನ ಪಾಸ್ ಕೂಡ ದುರುಪಯೋಗಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಪೂರ್ವ (ಕದ್ರಿ) ಪೊಲೀಸರು ಆರೋಪಿಗಳನ್ನು ಇತ್ತೀಚೆಗೆ ಬಂಧಿಸಿದ್ದರು. ವಿಧಾನಸೌಧ ಪೊಲೀಸ್ ಠಾಣೆಯಲ್ಲೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪೊಲೀಸರು ಶನಿವಾರ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ.