×
Ad

ಫೋನ್ ಕದ್ದಾಲಿಕೆ-ಐಎಂಎ ಪ್ರಕರಣ; ಸಿಬಿಐ ತನಿಖೆ ಚುರುಕು

Update: 2019-09-01 20:42 IST

ಬೆಂಗಳೂರು, ಸೆ.1: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ದೂರವಾಣಿ ಕದ್ದಾಲಿಕೆ ಹಾಗೂ ಐಎಂಎ ಬಹುಕೋಟಿ ವಂಚನೆ ಐಎಂಎ ಪ್ರಕರಣದ ತನಿಖೆಯ ಎಫ್‍ಐಆರ್ ದಾಖಲಿಸಿಕೊಂಡಿರುವ ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. 

ಇತ್ತೀಚಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಈ ಎರಡೂ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು.

ಸಿಬಿಐ ಎಸ್ಪಿ ಕಿರಣ್ ನೇತೃತ್ವದ ತಂಡ ಟೆಲಿಫೋನ್ ಕದ್ದಾಲಿಕೆ ಪ್ರಕರಣದ ತನಿಖೆಗೆ ಎಲ್ಲ ಮಾಹಿತಿ ಸಂಗ್ರಹಿಸುತ್ತಿದ್ದು, ಈಗಾಗಲೇ ಸೈಬರ್ ವಿಭಾಗಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಪ್ರಾಥಮಿಕವಾಗಿ ಕೆಲವು ಇನ್ಸ್ಪೆಕ್ಟರ್ ಗಳು ಹಾಗೂ ಇಲಾಖೆಯ ಟೆಲಿಫೋನ್ ಆಪರೇಟರ್ ಗಳ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಬಿಐ ಅಧಿಕಾರಿಗಳು ಈ ಮುಂಚೆ ದಾಖಲಾಗಿರುವ ಮಾಹಿತಿಗಳನ್ನು ಸಿಟ್(ಎಸ್ಐಟಿ) ತನಿಖಾಧಿಕಾರಿಗಳಿಂದ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News