‘ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಇಲ್ಲ’
Update: 2019-09-01 21:47 IST
ಉಡುಪಿ, ಸೆ.1: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು ಅದರ ನಂತರ ಕಾಂಗ್ರೆಸ್ ಕಾರ್ಯ ಕರ್ತರು ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರೆದಿದ್ದಾರೆ. ಹಾಗಾಗಿ ಸದ್ಯ ಕಾಂಗ್ರೆಸ್ ಪಕ್ಷದ ಕಾರ್ಯ ಕರ್ತರಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ ಎಂದು ಕಾಂಗ್ರೆಸ್ ನಗರಸಭಾ ಸದಸ್ಯರು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಸದಸ್ಯತ್ವವನ್ನು ಪಡೆಯಲು ಅರ್ಜಿ ಹಾಕಿಲ್ಲ ಎಂಬ ಗೊಂದಲ ಮಯವಾದ ಹೇಳಿಕೆ ಯಾವ ಅರ್ಥದಲ್ಲಿ ನೀಡಿದರು ಎಂಬುದು ನಮಗೆ ತಿಳಿದಿಲ್ಲ ಎಂದು ಉಡುಪಿ ನಗರ ಸಭಾ ಸದಸ್ಯರುಗಳಾದ ರಮೇಶ್ ಕಾಂಚನ್, ವಿಜಯ ಪೂಜಾರಿ ಬೈಲೂರು, ಅಮೃತಾ ಕೃಷ್ಣಮೂರ್ತಿ, ಸೆಲಿನಾ ಕರ್ಕಡ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.