ಕೇಂದ್ರದಿಂದ ಡಿ.ಕೆ.ಶಿವಕುಮಾರ್‌ಗೆ ಕಿರುಕುಳ: ಮಾಜಿ ಸಚಿವ ಚೆಲುವರಾಯಸ್ವಾಮಿ

Update: 2019-09-01 16:56 GMT

ಹೊಸದಿಲ್ಲಿ, ಸೆ.1: ಕೇಂದ್ರ ಸರಕಾರ ರಾಜಕೀಯ ದುರುದ್ದೇಶದಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದೆಲ್ಲವನ್ನು ಧೈರ್ಯವಾಗಿ ಎದುರಿಸುವ ಶಕ್ತಿ ಶಿವಕುಮಾರ್ ಅವರಿಗೆ ಇದೆ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ರವಿವಾರ ಹೊಸದಿಲ್ಲಿಯಲ್ಲಿ ಡಿ.ಕೆ.ಶಿವಕುಮಾರ್‌ನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಕಾಂಗ್ರೆಸ್ ಶಾಸಕರನ್ನು ರಕ್ಷಣೆ ಮಾಡಿದ್ದಕ್ಕಾಗಿ ಡಿ.ಕೆ.ಶಿವಕುಮಾರ್‌ಗೆ ಕಿರುಕುಳ ನೀಡಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಅಧಿಕಾರವನ್ನು ಈ ರೀತಿ ದುರುಪಯೋಗ ಪಡಿಸಿಕೊಳ್ಳಬಾರದು ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್ ಕಾನೂನು ಹೋರಾಟ ನಡೆಸುತ್ತಾರೆ. ಅದರಲ್ಲಿ ಅವರು ಜಯಗಳಿಸುತ್ತಾರೆ. ಆದರೆ, ಬಿಜೆಪಿ ನಾಯಕರು ತಮ್ಮ ಸ್ವಾರ್ಥಕ್ಕಾಗಿ ಪ್ರತಿಪಕ್ಷಗಳ ನಾಯಕರ ಮೇಲೆ ತನಿಖಾ ಸಂಸ್ಥೆಗಳನ ಮೇಲೆ ದಾಳಿ ನಡೆಸುವುದು ಎಷ್ಟರ ಮಟ್ಟಿಗೆ ಸರಿ. ಇದು ಹೀಗೆಯೇ ಮುಂದುವರೆದರೆ ಒಕ್ಕೂಟ ವ್ಯವಸ್ಥೆಗೆ ಮಾರಾಕವಾಗಲಿದೆ ಎಂದು ಅವರು ಹೇಳಿದರು.

ದೇಶದಲ್ಲಿ ಆರ್ಥಿಕ ಸ್ಥಿತಿ ಅಧೋಗತಿಗೆ ತಲುಪಿದ್ದು, ಅದನ್ನು ಮರೆಮಾಚಲು ಕೇಂದ್ರ ಸರಕಾರ ಪ್ರತಿಪಕ್ಷಗಳ ನಾಯಕರು ಮೇಲೆ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸುವಂತಹ ಕೆಲಸಕ್ಕೆ ಮುಂದಾಗಿದೆ. ಆ ಮೂಲಕ ಜನತೆಯನ್ನು ದಾರಿ ತಪ್ಪಿಸುವಂತಹ ಕಾರ್ಯದಲ್ಲಿ ನಿರತರವಾಗಿದೆ ಎಂದು ಅವರು ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News