×
Ad

ಪುತ್ತೂರು: ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; ನಾಲ್ವರು ಮೃತ್ಯು

Update: 2019-09-02 09:21 IST

ಪುತ್ತೂರು: ಮಾಣಿ - ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಶೂಂಠಿಕೊಪ್ಪ ನಿವಾಸಿಗಳೆಂದು ತಿಳಿದುಬಂದಿದ್ದು, ಪತಿ - ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಮಂಗಳೂರಿಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. 

ರಸ್ತೆ ಬದಿಯಲ್ಲಿರುವ ಈ ಕೆರೆಯು ತೀರಾ ಅಪಾಯಕಾರಿಯಾಗಿದ್ದು, ಇದನ್ನು ಮುಚ್ಚುವಂತೆ ಸಾರ್ವಜನಿಕರಿಂದ ಈ ಹಿಂದೆ ಒತ್ತಾಯ ಕೇಳಿ ಬಂದಿತ್ತು. ಆದರೆ ಈ ಕೆರೆ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ್ದು ಅವರು ಮುಚ್ಚಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಇದೀಗ ನಾಲ್ಕು ಜೀವಗಳನ್ನು ಕೆರೆ ಬಲಿ ಪಡೆದುಕೊಂಡಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News