×
Ad

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ: ನಾಲ್ಕು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಿದ ಜಿಲ್ಲಾಧಿಕಾರಿ

Update: 2019-09-02 13:43 IST
ಸಸಿಕಾಂತ್ ಸೆಂಥಿಲ್ 

ಮಂಗಳೂರು, ಸೆ. 2: ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ಹಲವು ದಿನಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದ್ದು, ನಾಲ್ಕು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕರಾವಳಿ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆ ಸ್ವಲ್ಪ ಬಿಡುವು ಪಡೆದಿತ್ತು. ಇದೀಗ ಮಳೆ ಮತ್ತೆ ಬಿರುಸು ಪಡೆದಿದ್ದು, ಮುಂದಿನ ಹಲವು ದಿನಗಳಲ್ಲಿ ಭಾರೀ ಮಳೆ ಬೀಳುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.

ಉತ್ತರ ಭಾರತದ ರಾಜಸ್ಥಾನ, ಮಧ್ಯಪ್ರದೇಶ, ವಿದರ್ಭ, ಪಶ್ಚಿಮ ಬಂಗಾಳ, ಗುಜರಾಜ್, ಮಹಾರಾಷ್ಟ್ರದ ಮಧ್ಯ ಭಾಗ, ಆಂಧ್ರಪ್ರದೇಶ ಮತ್ತು ಯೆನಮ್, ತೆಲಂಗಾಣದಲ್ಲಿ ಭಾರೀ ಪ್ರಮಾಣದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಇದು ಕೇರಳ ಮೂಲಕ ರಾಜ್ಯದ ಕರಾವಳಿಗೂ ಬರುವ ಸಾಧ್ಯತೆಯಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News