×
Ad

ಡಿಕೆಶಿ ರಾಜಕೀಯ ಮಾಡುವುದನ್ನು ಬಿಡಬೇಕು: ಡಿಸಿಎಂ ಅಶ್ವಥ್ ನಾರಾಯಣ

Update: 2019-09-02 20:28 IST

ಬೆಂಗಳೂರು, ಸೆ.2: ಡಿ.ಕೆ.ಶಿವಕುಮಾರ್ ರಾಜಕೀಯ ಮಾಡುವುದನ್ನು ಬಿಡಬೇಕು. ಕಾನೂನು ಉಲ್ಲಂಘನೆ ಇಡೀ ಸಮಾಜಕ್ಕೆ ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದರು.

ಸೋಮವಾರ ಸದಾಶಿವ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮನೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಯಾವುದೇ ಪಕ್ಷವನ್ನು ದೂಷಿಸುವ ಕೆಲಸ ಮಾಡಬಾರದು. ಕಾನೂನಿನ ರೀತಿ ತನಿಖಾ ಸಂಸ್ಥೆಗಳು ನಡೆದುಕೊಳ್ಳುತ್ತದೆಯೇ ಹೊರತು, ವ್ಯಕ್ತಿಗಳ ಸೂಚನೆಯಿಂದಲ್ಲ‌ ಎಂದರು.

ಭಾವನಾತ್ಮಕವಾಗಿ ಅಳುವ ಮೂಲಕ ಅನುಕಂಪ ಗಿಟ್ಟಿಸುವ ಕೆಲಸವನ್ನು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಾಡುತ್ತಿದ್ದಾರೆ ಎಂದ ಅವರು, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News