×
Ad

ವಿರಾಜಪೇಟೆಯಲ್ಲಿ ತಡೆಗೋಡೆ ಕುಸಿತ: ಹತ್ತು ಕುಟುಂಬಗಳ ಸ್ಥಳಾಂತರ

Update: 2019-09-03 16:51 IST

ಮಡಿಕೇರಿ, ಸೆ.3 : ವಿರಾಜಪೇಟೆ ನಗರದ ಏಳನೇ ವಾರ್ಡ್‍ನಲ್ಲಿ ರಾಜಕಾಲುವೆ ತಡೆ ಗೋಡೆ ಕುಸಿದ ಪರಿಣಾಮ ಮುಂಜಾಗೃತಾ ಕ್ರಮವಾಗಿ ಹತ್ತು ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ತಡೆಗೋಡೆ ಕುಸಿದು ಎರಡು ಮನೆಗಳಿಗೆ ಹಾನಿಯಾಗಿದೆ. ಅಕ್ಕಪಕ್ಕದ ಸುಮಾರು ಎಂಟು ಮನೆಗಳು ಅಪಾಯದಂಚಿನಲ್ಲಿವೆ. ಮುಂಜಾಗೃತಾ ಕ್ರಮವಾಗಿ ಹತ್ತು ಕುಟುಂಬಗಳನ್ನು ತಾತ್ಕಾಲಿಕವಾಗಿ ಬೇರೆಡೆಗೆ ಸ್ಥಳಾಂತರಿಸಲಾಯಿತು.

ಸ್ಥಳಕ್ಕೆ ಪಟ್ಟಣ ಪಂಚಾಯತ್ ಸದಸ್ಯೆ ದೇಚಮ್ಮಕಾಳಪ್ಪ ಭೇಟಿ ನೀಡಿ ಪರಿಶೀಲಿಸಿದರು. ಮನೆಯವರಿಗೆ ಧೈರ್ಯ ತುಂಬಿದ ಅವರು, ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.

ಪಂಚಾಯತ್ ಅಧಿಕಾರಿಗಳು ಕೂಡ ಸ್ಥಳ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News