×
Ad

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಜೆಡಿಎಸ್‌ಗೆ ರಾಜೀನಾಮೆ

Update: 2019-09-03 17:59 IST

ಉಡುಪಿ, ಸೆ.3: ಕಳೆದ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸೆ.3ರಂದು ಪ್ರಮೋದ್ ಮಧ್ವರಾಜ್ ಈ ಕುರಿತ ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಸಲ್ಲಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ವಿಷಯವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ಚರ್ಚಿಸಿದ್ದೆ. ಆ ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು, ಈ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿದ್ದರಿಂದ ನಾನು ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ಸ್ಪರ್ಧಿಸಬೇಕಾಯಿತು.ಆ ಸಂದರ್ಭ ಜೆಡಿಎಸ್ ನೀಡಿದ್ದ ಬಿ ಫಾರಂನಲ್ಲಿ ಪಕ್ಷದ ಸದಸ್ಯನವೆಂದು ನಮೂದಿಸಲ್ಪಿಟ್ಟಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಪದಾಧಿಕಾರಿಗಳು ನನಗೆ ಲೋಕಸಭಾ ಚುನಾವಣೆ ಸಂದರ್ಭ ಸಂಪೂರ್ಣ ಬೆಂಬಲ ನೀಡಿದ್ದರು. ಇದೀಗ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರಕಾರ ಇಲ್ಲದಿರುವುದರಿಂದ ನಾನು ತಾಂತ್ರಿಕ ಕಾರಣಗಳಿಂದ ಹೊಂದಿದ್ದ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪ್ರಮೋದ್ ಮಧ್ವರಾಜ್ ಪತ್ರದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News