ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿ ಪರ ಸಿಬಿಐ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ

Update: 2019-09-03 17:11 GMT

ಬೆಂಗಳೂರು, ಸೆ.3: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಕಲಂ 409ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಿಂದ ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ಆರೋಪಮುಕ್ತಗೊಳಿಸಿ ಸಿಬಿಐ ವಿಶೇಷ ಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಈ ಕುರಿತು ಸಿಬಿಐ ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.

ಸಿಬಿಐ ಪರ ವಾದಿಸಿದ ವಕೀಲ ಪಿ.ಪ್ರಸನ್ನ ಕುಮಾರ್ ಅವರು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ವಿರುದ್ಧ ಐಪಿಸಿ ಕಲಂ 409ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಸಿಬಿಐ ವಿಶೇಷ ಕೋರ್ಟ್ ರೆಡ್ಡಿ ಅವರನ್ನು ಆರೋಪಮುಕ್ತಗೊಳಿಸಿ ಆದೇಶಿಸಿದೆ. ಹೀಗಾಗಿ, ಈ ಆದೇಶಕ್ಕೆ ತಡೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಆರು ವಾರಗಳ ಕಾಲ ಮಧ್ಯಂತರ ತಡೆ ನೀಡಿ ಆದೇಶಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News