ಉಡುಪಿ : ಕೌಶಲ್ಯ ಅಭಿವೃದ್ಧಿ ತರಬೇತಿ
Update: 2019-09-04 18:21 IST
ಉಡುಪಿ, ಸೆ.4: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅ್ಯಯನಕೇಂದ್ರದವಿಜ್ಞಾನವಿಾಗದ ವತಿಯಿಂದ ಹಾಗೂ ರಾಮಕೃಷ್ಣ ಹೆಗಡೆ ಕೌಶಲ್ಯ ಅಭಿವೃದ್ಧಿ ಕೇಂದ್ರ ಕೊಂಕಣ ರೈಲ್ವೆ ಇದರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಕ್ರಮ ನಡೆಯಿತು.
ಕೊಂಕಣ ರೈಲ್ವೇ ಹಿರಿಯ ತರಬೇತುದಾರ ಶ್ರೀಧರ ಅವಭರತ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜ್ಞಾನದೊಂದಿಗೆ ಕೌಶಲ್ಯದ ಅಗತ್ಯವಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದಲ್ಲಿ ಮುಂದಿನ ಭಷ್ಯದಲ್ಲಿ ವಿಪುಲ ಉದ್ಯೋಗಾವಕಾಶಗಳು ದೊರೆಯಲಿವೆ ಎಂದರು.
ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಮಕ್ಕಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡು ಉತ್ತಮ ಉದೊ್ಯೀಗ ಫಲಿಸಲಿ ಎಂದು ಹಾರೈಸಿದರು.
ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ವಿಜ್ಞಾನ ಸಂಘದ ಸಂಚಾಲಕ ಪ್ರೊ.ಯು.ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು.