×
Ad

ಉಡುಪಿ: ನೇರ ನೇಮಕಾತಿ

Update: 2019-09-04 20:39 IST

ಉಡುಪಿ, ಸೆ.4: ಪೇಟಿಎಂ ಹಾಗೂ ಸೋನಿ ಕಂಪೆನಿ ವತಿಯಿಂದ ಫೀಲ್ಡ್ ಸರ್ವಿಸ್ ಇಂಜಿನಿಯರ್ ಹುದ್ದೆಗೆ (ವೇತನ-20,000ರೂ.) ನೇರ ನೇಮಕಾತಿ ಸೆ.6ರಂದು ಬೆಳಗ್ಗೆ 10:30ರಿಂದ ಅಪರಾಹ್ನ 3 ಗಂಟೆಯವರೆಗೆ ಮಣಿಪಾಲ ದಲ್ಲಿರುವ ಜಿಲ್ಲಾ ಉದ್ಯೋ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ ಹಾಗೂ ಪದವಿ ವಿದ್ಯಾರ್ಹತೆ ಯೊಂದಿಗೆ, ಡ್ರೈವಿಂಗ್ ಲೈಸನ್ಸ್ ಹೊಂದಿರುವ ಅಭ್ಯರ್ಥಿಗಳು ಹಾಗೂ ಎಂಬಿಎ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ (ವೇತನ-13,600) ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂಆಧಾರ್ ಕಾರ್ಡ್‌ನೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉಡುಪಿ, ದೂರವಾಣಿ ಸಂಖ್ಯೆ:0820-2574869 ಅಥವಾ ಮೊಬೈಲ್ ಸಂಖ್ಯೆ: 9480259790, 9164583872ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News