ಉಡುಪಿ: ರಾಷ್ಟ್ರೀಯ ಕ್ರೀಡಾ ದಿನಾಚರಣೆ
Update: 2019-09-04 20:39 IST
ಉಡುಪಿ, ಸೆ. 4: ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಅಂತಾರಾಷ್ಟ್ರೀಯ ಆಟಗಾರ್ತಿ ಕರಿಷ್ಮಾ ಎಸ್. ಸನಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಂಡು, ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಕ್ರೀಡಾ ಮನೋಭಾವ ವನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ಅಧ್ಯಕ್ಷತೆ ವಹಿಸಿದ್ದರು.ಕ್ರೀಡಾ ಕಾರ್ಯದರ್ಶಿ ಮಂಜುನಾಥ್ ಹಾಗೂ ಕೃಷ್ಣ ಭಟ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕಿ ಸವಿತಾ ಸ್ವಾಗತಿಸಿ ದಿವ್ಯಾ ವಂದಿಸಿದರು.