×
Ad

ಇಂಜಿನಿಯರ್ ಹುದ್ದೆಗೆ ನೇರ ನೇಮಕಾತಿ

Update: 2019-09-04 20:48 IST

ಮಂಗಳೂರು, ಸೆ.4: ಲಾಲ್‌ಬಾಗ್‌ನ ಮಹಾನಗರಪಾಲಿಕೆ ಕಟ್ಟಡದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲಿ ಪೇಟಿಯಂ ಹಾಗೂ ಸೋನಿ ಕಂಪೆನಿಯಿಂದ ಫೀಲ್ಡ್ ಸರ್ವಿಸ್ ಇಂಜಿನಿಯರ್ ಹುದ್ದೆಗೆ ನೇರ ನೇಮಕಾತಿ ನಡೆಯಲಿದೆ.

ಹುದ್ದೆಗೆ 20,000 ರೂ. ವೇತನವಿದ್ದು, ಸೆ.7ರಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ನಡೆಯಲಿದೆ.

 ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆಯೊಂದಿಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರುವ ಅಭ್ಯರ್ಥಿಗಳು ಹಾಗೂ ಎಂಬಿಎ ಇಂಟರ್‌ನ್‌ಶಿಪ್ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ಬಯೋಡಾಟಾ ಹಾಗೂ ಆಧಾರ್ ಕಾರ್ಡ್‌ನೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು, ದೂ.ಸಂ.: 0824-2457139ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News