×
Ad

ದೇಶದಲ್ಲಿ ‘ರಾಜಕೀಯ ಸೇಡು’ ಕಾನೂನಿಗಿಂತಲೂ ಹೆಚ್ಚು ಪ್ರಬಲವಾಗಿದೆ: ಡಿ.ಕೆ.ಶಿವಕುಮಾರ್ ವಿಡಿಯೋ ಸಂದೇಶ

Update: 2019-09-04 21:29 IST

ಹೊಸದಿಲ್ಲಿ, ಸೆ.4: ದೇಶದಲ್ಲಿ ರಾಜಕೀಯ ಸೇಡು ಕಾನೂನಿಗಿಂತಲೂ ಹೆಚ್ಚು ಪ್ರಬಲವಾಗಿದೆ ಎಂದು ಈಡಿ ವಶದಲ್ಲಿರುವ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಸಂದೇಶವನ್ನು ಟ್ವೀಟ್ ಮಾಡಿರುವ ಅವರು, ರಾಜಕೀಯ ಸೇಡು ಕಾನೂನಿಗಿಂತಲೂ ಹೆಚ್ಚು ಪ್ರಬಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾತ್ರಿ ಈಡಿ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಅವರನ್ನು ಬಂಧಿಸಿದ್ದರು. ಇಂದು ಹೊಸದಿಲ್ಲಿಯ ರೋಸ್ ಅವೆನ್ಯೂ ವಿಶೇಷ ಕೋರ್ಟ್ ಅವರನ್ನು ಸೆ.13 ರ ವರೆಗೆ ಈಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News