ಮುಂಬೈ ಮಳೆಗೆ ತತ್ತರಿಸಿದ ಜನ

Update: 2019-09-04 18:19 GMT
ಮಹಾರಾಷ್ಟ್ರದ ಮುಂಬೈ ಹಾಗೂ ಇತರ ಭಾಗಗಳಲ್ಲಿ ಬುಧವಾರ ಭಾರೀ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಳೆಯ ಹಿನ್ನೆಲೆಯಲ್ಲಿ ಹಲವು ಸ್ಥಳೀಯ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಯಿತು. ವಿಮಾನಗಳು ವಿಳಂಬವಾಗಿ ಸಂಚರಿಸಿದವು. ರಸ್ತೆಯಲ್ಲಿ ವಾಹನಗಳು ನಿಧಾನಗತಿಯಲ್ಲಿ ಸಾಗಿದವು. ಮುಂದಿನ 24 ಗಂಟೆಗಲ್ಲಿ ಮುಂಬೈ ಹಾಗೂ ಸಮೀಪದ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಈ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಯಾವುದೇ ಪರಿಸ್ಥಿತಿ ನಿಭಾಯಿಸಲು ಸಿದ್ಧರಾಗಿರುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor