ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಕೃಷ್ಣಾ ನದಿ ತೀರವಾಸಿಗಳಿಗೆ ಪ್ರವಾಹ ಭೀತಿ

Update: 2019-09-05 04:52 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.5: ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೊಯ್ನಿ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆಗೊಳಿಸಲಾಗಿದೆ. ಇದರಿಂದ ಕೃಷ್ಣಾ ನದಿ ಭಾಗದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡಿದ್ದು, ತಲಕಾವೇರಿಗೆ ಸಂಪರ್ಕ ಕಡಿತಗೊಂಡಿದೆ.

ಹಾರಂಗಿ ಜಲಾಶಯದಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕುಶಾಲನಗರ ಸುತ್ತಲಿನ ಜನರಿಗೆ ಜಿಲ್ಲಾಡಳಿತ ಎಚ್ಚರದಿಂದಿರುವಂತೆ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News