ಪಿ.ಚಿದಂಬರಂ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್

Update: 2019-09-05 06:02 GMT

ಹೊಸದಿಲ್ಲಿ, ಸೆ.5: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಈ.ಡಿ) ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ದಿಲ್ಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. 

ದಿಲ್ಲಿ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಇದರಿಂದಾಗಿ ಮತ್ತೆ ಅವರಿಗೆ ಹಿನ್ನಡೆ ಉಂಟಾಗಿದೆ.

“ಆರಂಭಿಕ ಹಂತದಲ್ಲಿ ಜಾಮೀನು ನೀಡುವುದರಿಂದ ತನಿಖೆಗೆ ಹಿನ್ನಡೆಯಾಗಬಹುದು ನಿರೀಕ್ಷಿತ ಜಾಮೀನು ನೀಡಲು ಇದು ಸೂಕ್ತ ಪ್ರಕರಣವಲ್ಲ. ಆರ್ಥಿಕ ಅಪರಾಧಗಳು ವಿಭಿನ್ನ ವಾಗಿರುತ್ತದೆ ಮತ್ತು ಅದನ್ನು ನಾನಾ ರೀತಿಯಲ್ಲಿ ತನಿಖೆ ನಡೆಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಪಿ ಚಿದಂಬರಂ ಅವರು ನಿಯಮಿತವಾಗಿ ಜಾಮೀನು ಪಡೆಯಲು ವಿಚಾರಣಾ ನ್ಯಾಯಾಲಯದ ಮುಂದೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

 ಸಿಬಿಐ ಮತ್ತು ಈ.ಡಿ ತನಿಖೆ ನಡೆಸುತ್ತಿರುವ ಎರಡು ಪ್ರಕರಣಗಳಲ್ಲಿ ನಿರೀಕ್ಷಣಾ  ಜಾಮೀನು ನೀಡುವ ಮಾಜಿ ಸಚಿವರ ಮನವಿಯನ್ನು ದಿಲ್ಲಿ  ಹೈಕೋರ್ಟ್ ತಿರಸ್ಕರಿಸಿದ ನಂತರ ಪಿ ಚಿದಂಬರಂ ಅವರನ್ನು  ಸಿಬಿಐ  ಮತ್ತು ಈ.ಡಿ  ಅಧಿಕಾರಿಗಳು ಆಗಸ್ಟ್ 21 ರಂದು  ದಿಲ್ಲಿಯ ಅವರ  ಮನೆಯಿಂದ ಬಂಧಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News