ಹಿಂಜಾವೇ ಮುಖಂಡನ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

Update: 2019-09-05 09:56 GMT

ಪುತ್ತೂರು, ಸೆ.5: ಸಂಪ್ಯದಲ್ಲಿ ಮಂಗಳವಾರ ರಾತ್ರಿ ನಡೆದ ಹಿಂದೂ ಜಾಗರಣ ವೇದಿಕೆಯ ಮುಖಂಡ, ಅರ್ಯಾಪು ಮೇರ್ಲ ನಿವಾಸಿ ಕಾರ್ತಿಕ್ ಸುವರ್ಣ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಪುತ್ತೂರು ಆರ್ಯಾಪು ಗ್ರಾಮದ ಚರಣ್(26) ಆತನ ಸಹೋದರ ಕಿರಣ್ (36) ಮತ್ತು ಮಂಗಳೂರು ಉಳ್ಳಾಲಬೈಲು ನಿವಾಸಿ ಪ್ರೀತೇಶ್(28) ಬಂಧಿತ ಆರೋಪಿಗಳಾಗಿದ್ದಾರೆ.

ಸಂಪ್ಯದಲ್ಲಿ ಮಂಗಳವಾರ ರಾತ್ರಿ ಗಣೇಶೋತ್ಸವ ಕಾರ್ಯಕ್ರಮದ ಸಂದರ್ಭ ಕಾರ್ತಿಕ್ ಸುವರ್ಣರನ್ನು ಮೂವರು ದುಷ್ಕರ್ಮಿಗಳು ಮಾರಕಾಯುಧದಿಂದ ಎದೆಗೆ ತಿವಿದು ಕೊಲೆಗೈದಿದ್ದರು. ಈ ಪ್ರಕರಣ ದಾಖಲಿಸಿಕೊಂಡಿದ್ದ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕೊಲೆ ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದರು.

ಇದೀಗ ಕೊಲೆ ನಡೆದ ಎರಡನೇ ದಿನಕ್ಕೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News