ಹೊಸಂಗಡಿ: ಮೊಬೈಲ್ ಅಂಗಡಿಗೆ ನುಗ್ಗಿ ಕಳವು

Update: 2019-09-05 13:31 GMT

ಮಂಜೇಶ್ವರ: ಹೊಸಂಗಡಿ ಪೇಟೆಯ ಮೊಬೈಲ್ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳನೋರ್ವ ಸಾವಿರಾರು ರೂ. ಮೌಲ್ಯದ ಮೊಬೈಲನ್ನು ಕಳವುಗೈದ ಘಟನೆ ನಡೆದಿದೆ. ಗುರುವಾರ ಬೆಳಗ್ಗೆ ಅಂಗಡಿ ತೆರೆದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಮುತ್ತಲಿಬ್ ಎಂಬವರಿಗೆ ಸೇರಿದ ಮೊಬೈಲ್ ಅಂಗಡಿಯ ಹಿಂಬದಿಯ ಗೋಡೆಗೆ ಹಾಕಲಾಗಿದ್ದ ಪ್ಲೈವುಡನ್ನು ಮುರಿದು ಅಂಗಡಿಗೆ ನುಗ್ಗಿದ ಕಳ್ಳ 1.5 ಲಕ್ಷ ರೂ. ಮೌಲ್ಯದ ಮೊಬೈಲ್ ಗಳನ್ನು ಕಳವು ನಡೆಸಿದ್ದಾನೆ. ಮುಖವಾಡ ಧರಿಸಿ ಹಿಂಬದಿಯಿಂದ ಅಂಗಡಿಗೆ ನುಗ್ಗುವ ದೃಶ್ಯವು ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜೇಶ್ವರ ಠಾಣಾಧಿಕಾರಿ ಅನೂಪ್ ನೇತೃತ್ವದ ಪೊಲೀಸ್ ತಂಡ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕಾಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News