ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಕುಮಾರಸ್ವಾಮಿಗೆ ಸಮನ್ಸ್ ಜಾರಿ

Update: 2019-09-05 14:17 GMT

ಬೆಂಗಳೂರು, ಸೆ.5: ಬನಶಂಕರಿಯ ಹಲಗೆ ವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ್ ಕೋರ್ಟ್ ಗುರುವಾರ ಸಮನ್ಸ್ ಜಾರಿ ಮಾಡಿದೆ.

ಲೋಕಾಯುಕ್ತ  ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್ ಪ್ರಶ್ನಿಸಿ ಮಹದೇವಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ್ ಅವರಿದ್ದ ನ್ಯಾಯಪೀಠದಲ್ಲಿ ನಡೆಯಿತು. ಎಚ್‌ಡಿಕೆ ಅವರಿಗೆ ಅ.4ರಂದು ಕೋರ್ಟ್‌ಗೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿತು.

ಪ್ರಕರಣ ಕುರಿತು ನ್ಯಾಯಾಲಯ ತನಿಖೆಗೂ ಆದೇಶಿಸಿತ್ತು. ಆರು ತಿಂಗಳ ಹಿಂದೆ ಲೋಕಾಯುಕ್ತ ಪೊಲೀಸರು ಬಿ-ರಿಪೋಟ್ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಕೋರ್ಟ್ ಮೆಟ್ಟಿಲೇರಿದ್ದರು.

2012ರಿಂದ ಸುಮ್ಮನಿದ್ದು ಆರು ತಿಂಗಳ ಹಿಂದೆ ಬಿ-ರಿಪೋರ್ಟ್ ಸಲ್ಲಿಸಿರುವ ಬಗ್ಗೆ ನ್ಯಾಯಾದೀಶರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಮರುತನಿಖೆಗೆ ನ್ಯಾಯಾಧೀಶ ರಾಮಚಂದ್ರ ಡಿ.ಉದ್ದಾರ್ ಅವರು ಆದೇಶ ನೀಡಿದ್ದಾರೆ. ಅಲ್ಲದೆ, ಎಚ್‌ಡಿಕೆಗೆ ಸಮನ್ಸ್ ನೀಡಿದ್ದಾರೆ. ಎಚ್‌ಡಿಕೆ ಅವರು 2006ರಲ್ಲಿ ಸಿಎಂ ಆಗಿದ್ದಾಗ ಜಮೀನನ್ನು ಡಿನೋಟಿಫಿಕೇಷನ್ ಮಾಡಿದ ಆರೋಪ ಅವರ ಮೇಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News