ಐಎಂಎ ವಂಚನೆ ಪ್ರಕರಣ: ಬಿಡಿಎ ಇಂಜಿನಿಯರ್ ವಿರುದ್ಧ ಎಫ್‌ಐಆರ್

Update: 2019-09-05 16:21 GMT

ಬೆಂಗಳೂರು, ಸೆ.5: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ ಕೇಂದ್ರ ತನಿಖಾ ದಳ(ಸಿಬಿಐ) ಬಿಡಿಎ ಇಂಜಿನಿಯರ್ ಕುಮಾರ್ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಿಕೊಂಡಿದೆ ಎನ್ನಲಾಗಿದೆ.

ಪ್ರಮುಖ ಆರೋಪಿ ಮನ್ಸೂರ್ ಖಾನ್‌ನಿಂದ, ಬಿಡಿಎ ಇಂಜಿನಿಯರ್ ಕುಮಾರ್ 5 ಕೋಟಿ ರೂ ಹಣವನ್ನು ಅಕ್ರಮವಾಗಿ ಪಡೆದಿರುವ ವಿಚಾರ ಸಿಟ್(ಎಸ್‌ಐಟಿ) ತನಿಖೆ ವೇಳೆ ಗೊತ್ತಾಗಿತ್ತು. ಈ ಆಧಾರದ ಮೇಲೆ ಕುಮಾರ್ ಮನೆ ಶೋಧ ನಡೆಸಿದ್ದ ತನಿಖಾಧಿಕಾರಿಗಳು ಪ್ರಕರಣ ಸಂಬಂಧ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.

ಐಎಂಎ ಪ್ರಕರಣದ ಗಂಭೀರತೆ ಅರಿತು ರಾಜ್ಯ ಸರಕಾರ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು. ಈ ಹಿನ್ನೆಲೆಯಲ್ಲಿ 30 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದೀಗ ಬಿಡಿಎ ಇಂಜಿನಿಯರ್ ವಿರುದ್ಧ ಮೊಕದ್ದಮೆ ಹೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News