ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಯೋಜನೆಯಡಿ ಅರ್ಜಿ ಆಹ್ವಾನ

Update: 2019-09-05 17:17 GMT

ಬೆಂಗಳೂರು, ಸೆ. 5: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ವಾರ್ಷಿಕ 15 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರಕಾರಿ ಸ್ಥಳಿಯ ಸಂಸ್ಥೆ/ಅನುದಾನಿತ ಸಂಸ್ಥೆಗಳು/ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ-ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.

ಪ್ರವರ್ಗ-1ರ ವಿದ್ಯಾರ್ಥಿಯ ಪೋಷಕರ ವಾರ್ಷಿಕ ವರಮಾನ 2.50 ಲಕ್ಷ ರೂ.ಗಳಿಗಿಂತ ಕಡಿಮೆ ಇರಬೇಕು. ಪ್ರವರ್ಗ-2ಎ ವಿದ್ಯಾರ್ಥಿಯ ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ.ಗಳಿಗಿಂತ ಕಡಿಮೆ ಇರಬೇಕು. ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ ದೂರದವರಾಗಿರಬೇಕು.

ಆದರೆ ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ/ಪಟ್ಟಣ ಆಗಿದ್ದು, ಅವರು ಬೇರೆ ನಗರ/ಪಟ್ಟಣದಲ್ಲಿರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಅರ್ಹರಿರುತ್ತಾರೆ. ವಿದ್ಯಾರ್ಥಿಯು ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸಲು ಸೆ.20 ಕೊನೆಯದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ವೆಬ್‌ಸೆಟ್ https://gokdom.kar.nic.in ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೆ ಮಹಡಿ, ವಿ.ವಿ.ಗೋಪುರ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News