ಸಿಎಂ ಪರಿಹಾರ ನಿಧಿಗೆ ಹೈಕೋರ್ಟ್‌ ನ್ಯಾಯಾಧೀಶರ ದೇಣಿಗೆ

Update: 2019-09-05 16:35 GMT

ಬೆಂಗಳೂರು, ಸೆ. 5: ಭಾರೀ ಮಳೆ ಮತ್ತು ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ 18 ಜಿಲ್ಲೆಗಳ ನೆರವಿಗೆ ಧಾವಿಸಿರುವ ಹೈಕೋರ್ಟ್‌ನ ನ್ಯಾಯಾಧೀಶರು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 7.4 ಲಕ್ಷ ರೂ.ಗಳ ಚೆಕ್ ಅನ್ನು ನೀಡಿದ್ದಾರೆ.

ಗುರುವಾರ ಮುಖ್ಯಮಂತ್ರಿ ಯಡಿಯೂರಪ್ಪ, ಹೈಕೋರ್ಟಿನ ಮುಖ್ಯ ನ್ಯಾಯಾಧೀಶ ನ್ಯಾ.ಅಭಯ್ ಶ್ರೀನಿವಾಸ್ ಓಕಾ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ನ್ಯಾ.ಓಕಾ ಅವರು ಸಿಎಂ ಪರಿಹಾರ ನಿಧಿಗೆ ತಮ್ಮನ್ನೂ ಒಳಗೊಂಡಂತೆ ಹೈಕೋರ್ಟ್‌ನ ಎಲ್ಲ 31 ನ್ಯಾಯಾಧೀಶರ ದೇಣಿಗೆ ಒಟ್ಟು 7.4ಲಕ್ಷ ರೂ.ಗಳ ಚೆಕ್ ಅನ್ನು ಸಿಎಂಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಹೈಕೋರ್ಟಿನ ಮುಖ್ಯ ನ್ಯಾಯಾಧೀಶ ಓಕಾ ಅವರೊಂದಿಗೆ ಇತರ ನ್ಯಾಯಾಧೀಶರುಗಳು ಮತ್ತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News