×
Ad

ಆ್ಯಮ್ನೆಸ್ಟಿ ಇಂಟರ್‌ನ್ಯಾಶನಲ್‌ಗೆ ಈ.ಡಿ. ಶೋಕಾಸ್ ನೋಟಿಸ್

Update: 2019-09-05 23:15 IST

ಹೊಸದಿಲ್ಲಿ, ಸೆ.5: ವಿದೇಶಿ ವಿನಿಮಯ ಕಾನೂನು ಉಲ್ಲಂಘನೆ ಆರೋಪದಲ್ಲಿ ಅಂತಾರಾಷ್ಟ್ರೀಯ ಮಾನವಹಕ್ಕುಗಳ ಸಂಘಟನೆ ಆ್ಯಮ್ನೆಸ್ಟಿ ಇಂಟರ್ ನ್ಯಾಶನಲ್ ಗೆ ಜಾರಿ ನಿರ್ದೇಶನಾಲಯವು ಶೋಕಾಸ್ ನೋಟಿಸ್ ಜಾರಿ ಮಾಡಿದೆ.

51 ಕೋಟಿ ರೂಪಾಯಿ ಅಕ್ರಮಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಈ ಶೋಕಾಸ್ ನೋಟಿಸು ಜಾರಿ ಮಾಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ) ಅಡಿಯಲ್ಲಿ ತನಿಖೆ ಪೂರ್ಣಗೊಂಡ ಬಳಿಕ ಈ ನೋಟಿಸು ಜಾರಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಆ್ಯಮ್ನೆಸ್ಟಿ ಇಂಟರ್‌ ನ್ಯಾಶನಲ್ ‌ನ ಬೆಂಗಳೂರು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಕಳೆದ ವರ್ಷ ದಾಳಿ ನಡೆಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News