ಅಶ್ಲೀಲ ವಿಡಿಯೋ ವೀಕ್ಷಣೆ ದೇಶ ವಿರೋಧಿ ಕೃತ್ಯವಲ್ಲ: ಸಚಿವ ಮಾಧುಸ್ವಾಮಿ

Update: 2019-09-06 08:10 GMT

    ಬೆಂಗಳೂರು, ಸೆ.6: ‘‘ವಿಧಾನಸಭೆಯಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿರುವುದು ದೇಶ ವಿರೋಧಿ ಕೃತ್ಯವಲ್ಲ’’ಎಂದು ರಾಜ್ಯದ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ. ಈ ಮೂಲಕ 2012ರಲ್ಲಿ ವಿಧಾನಸಭೆಯ ಕಲಾಪದ ವೇಳೆ ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ತಪ್ಪಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಾಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯ ವರ್ತನೆಯನ್ನು ಸಮರ್ಥಿಸಿಕೊಂಡಿದ್ದಾರೆ. 

‘‘ಸವದಿಯ ವರ್ತನೆ ತಪ್ಪು. ಗೊತ್ತಿದ್ದು, ಗೊತ್ತಿಲ್ಲದೆಯೋ, ಅಶ್ಲೀಲ ವಿಡಿಯೋವನ್ನು ವೀಕ್ಷಿಸುವುದು ನೈತಿಕವಾಗಿ ತಪ್ಪು. ನಾವೆಲ್ಲರೂ ತಪ್ಪು ಮಾಡುತ್ತೇವೆ. ಇದರ ಬಗ್ಗೆ ಹೆಚ್ಚು ಚರ್ಚಿಸುವುದು ಹಾಗೂ ಸವದಿಯನ್ನು ಟೀಕಿಸುವುದು ಸರಿಯಲ್ಲ. ಅವರು ಯಾರಿಗೂ ಮೋಸ ಮಾಡಿಲ್ಲ. ದೇಶ ವಿರೋಧಿ ಚಟುವಟಿಕೆ ನಡೆಸಿಲ್ಲ. ಅಶ್ಲೀಲ ವಿಡಿಯೋ ನೋಡಿದ್ದು ಸರಿ ಎಂದು ನಾನು ಹೇಳುತ್ತಿಲ್ಲ. ಇದೇ ವಿಚಾರಕ್ಕೆ ಅವರನ್ನು ಟೀಕಿಸುವುದು ಸರಿಯಲ್ಲ ಎನ್ನುವುದು ನನ್ನ ವಾದ ’’ಎಂದು ತುಮಕೂರಿನಲ್ಲಿ ಗುರುವಾರ ಮಾಧುಸ್ವಾಮಿ ಹೇಳಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News