‘ಮಲಬಾರ್‌ ಗೋಲ್ಡ್’ನಿಂದ ಶಿಕ್ಷಕರ ದಿನಾಚರಣೆ

Update: 2019-09-06 08:31 GMT

ಉಡುಪಿ, ಸೆ.5: ಮಲಬಾರ್ ಗೋಲ್ಡ್ ಆ್ಯಂಡ್ ಡೈಮೆಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಗುರುವಾರ ಸಂಸ್ಥೆಯ ಉಡುಪಿ ಮಳಿಗೆಯಲ್ಲಿ ಆಯೋಜಿಸಲಾಗಿತ್ತು .

ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಮಾತನಾಡಿ, ವ್ಯಕ್ತಿತ್ವ ರೂಪಿಸುವ ಶಿಕ್ಷಕರನ್ನು ಗುರುತಿಸುವ ಮಲಬಾರ್ ಗೋಲ್ಡ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಶಿಕ್ಷಕರಾದ ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಹೂಡೆ ಸಾಲಿಹಾತ್ ಅರೇಬಿಕ್ ಕಾಲೇಜಿನ ಪ್ರಾಂಶುಪಾಲ ಕುಲ್ಸುಮ್ ಅಬೂಬಕರ್, ಅಜ್ಜರಕಾಡು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಡಾ.ರಮ್ಯಾ ಐತಾಳ್ ಹಾಗೂ ಕಾರ್ಕಳ ವಿಜೇತ ವಿಶೇಷ ಶಾಲೆಯ ಸಂಸ್ಥಾಪಕಿ, ಪ್ರಾಂಶುಪಾಲೆ ಡಾ.ಕಾಂತಿ ಹರೀಶ್ ರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಬಡಗುಬೆಟ್ಟು ಕೋ. ಸೊಸೈಟಿಯ ಮಹಾ ಪ್ರಬಂಧಕ ಇಂದ್ರಾಳಿ ಜಯಕರ ಶೆಟ್ಟಿ, ನಗರ ಸಭೆ ಸದಸ್ಯೆ ಮಾನಸಾ ಚಿದಾನಂದ ಪೈ ಮುಖ್ಯ ಅತಿಥಿಯಾಗಿದ್ದರು.

ತಾರಾ ಆಚಾರ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಶಿಕ್ಷಕರ ದಿನಾಚರಣೆ ಪ್ರಯುಕ್ತ ಸೆ.5ರಿಂದ ಸೆ.30ರವರೆಗೆ ಎಲ್ಲ ಶಿಕ್ಷಕರಿಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಪ್ರತಿ 25,000 ರೂ. ಮೌಲ್ಯದ ಖರೀದಿಯ ಮೇಲೆ 1,000 ರೂ. ರಿಯಾಯಿತಿ ನೀಡಲಾಗುವುದು ಎಂದು ಉಡುಪಿ ಮಳಿಗೆಯ ಮುಖ್ಯಸ್ಥ ಹಫೀಝ್ ರಹ್ಮಾನ್ ತಿಳಿಸಿದ್ದಾರೆ.

ಮಾರ್ಕೆಟಿಂಗ್ ಹೆಡ್ ರಾಘವೇಂದ್ರ ನಾಯಕ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News