ರಾಜೀನಾಮೆಗೆ ಮುಂದಾದ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆ ತಾಹಿಲ್ ರಮಣಿ

Update: 2019-09-06 16:38 GMT

ಚೆನ್ನೈ, ಸೆ.6: ಮೇಘಾಲಯ ಹೈಕೋರ್ಟ್ ಗೆ ತನ್ನ ವರ್ಗಾವಣೆಯನ್ನು ಮರುಪರಿಶೀಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ 2 ದಿನಗಳ ನಂತರ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆ ವಿಕೆ ತಾಹಿಲ್ ರಮಣಿ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ತಾಹಿಲ್ ರಮಣಿಯವರನ್ನು ಮೇಘಾಲಯ ಹೈಕೋರ್ಟ್ ಗೆ ವರ್ಗಾಯಿಸುವಂತೆ ಸಿಜೆಐ ರಂಜನ್ ಗೊಗೊಯಿ ನೇತೃತ್ವದ ಪೀಠ ಶಿಫಾರಸು ಮಾಡಿತ್ತು. ಕೊಲಿಜಿಯಂ ಈಗಾಗಲೇ ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಜಸ್ಟಿಸ್ ಎ.ಕೆ. ಮಿತ್ತಲ್ ರನ್ನು ಮದ್ರಾಸ್ ಹೈಕೋರ್ಟ್ ಗೆ ವರ್ಗಾಯಿಸಿದೆ.

ಕಳೆದ ವರ್ಷ ಆಗಸ್ಟ್ 8ರಂದು ತಾಹಿಲ್ ರಮಣಿಯವರನ್ನು ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಲಾಗಿತ್ತು.

ಬಾಂಬೆ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿದ್ದಾಗ ತಾಹಿಲ್ ರಮಣಿಯವರು ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಆರೋಪಿಗಳ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News