ನೂತನ ದ.ಕ. ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ನೇಮಕ
Update: 2019-09-06 22:55 IST
ಮಂಗಳೂರು, ಸೆ.6: ದ.ಕ. ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
2011ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಅವರು ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೈಸೂರಿನ ಎನ್‌ಐಇಯಿಂದ ಬಿ.ಇ. (ಇ ಆ್ಯಂಡ್ ಸಿ) ಪದವೀಧರೆ ಸಿಂಧು ಬಿ.ರೂಪೇಶ್ 2011ನೇ ಸಾಲಿನ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು.