ಜಮ್ಮು-ಕಾಶ್ಮೀರ: ಉಗ್ರರ ದಾಳಿಗೆ ಬಾಲಕಿ ಸಹಿತ ನಾಲ್ವರು ಗಾಯ

Update: 2019-09-07 07:04 GMT

 ಶ್ರೀನಗರ, ಸೆ.7: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಹಣ್ಣು ವ್ಯಾಪಾರಿಯೊಬ್ಬರ ಮನೆಯೊಂದರ ಮೇಲೆ ಉಗ್ರಗಾಮಿಗಳು ನಡೆಸಿದ ದಾಳಿಗೆ ಓರ್ವ ಎರಡು ವರ್ಷದ ಬಾಲಕಿ ಸಹಿತ ಒಂದೇ ಕುಟುಂಬದ ನಾಲ್ವರು ಸದಸ್ಯರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸಿರುವ ಕೇಂದ್ರದ ನಿರ್ಧಾರವನ್ನು ಖಂಡಿಸಿ ಹಣ್ಣು ಅಂಗಡಿ ಬಂದ್ ಮಾಡಲು ನಿರಾಕರಿಸಿದ್ದ ವ್ಯಾಪಾರಿ ಮೇಲೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ‘‘ಭಯೋತ್ಪಾದಕರು ನಡೆಸಿರುವ ಗುಂಡಿನ ದಾಳಿಗೆ ಸೋಪೊರ್‌ನ ಡಂಗೆರ್‌ಪೊರಾ ಗ್ರಾಮದಲ್ಲಿ ಉಸ್ಮಾ ಜಾನ್ ಎಂಬ ಬಾಲಕಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಎಲ್ಲರ ಪರಿಸ್ಥಿತಿ ಸ್ಥಿರವಾಗಿದೆ’’ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News