21 ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-09-07 13:13 GMT

ಬೆಂಗಳೂರು, ಸೆ.7: ರಾಜ್ಯ ಸರಕಾರವು ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ 9 ಮಂದಿ ಐಎಎಸ್ ಅಧಿಕಾರಿಗಳು ಸೇರಿದಂತೆ ಒಟ್ಟು 21 ಮಂದಿಯನ್ನು ವರ್ಗಾವಣೆ ಮಾಡಿ ಶುಕ್ರವಾರ ರಾತ್ರಿ ವರ್ಗಾವಣೆ ಮಾಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಆಡಳಿತ)- ವಿ.ಅನ್ಬುಕುಮಾರ್, ಸಮುದಾಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ-ಡಾ.ಎನ್.ವಿ.ಪ್ರಸಾದ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಘನ ತ್ಯಾಜ್ಯ ನಿರ್ವಹಣೆ)- ಡಿ.ರಣದೀಪ್.

ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತ- ಕೆ.ಪಿ.ಮೋಹನ್ ರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ರಾಷ್ಟ್ರೀಯ ಆರೋಗ್ಯ ಯೋಜನೆಯ ಯೋಜನಾ ನಿರ್ದೇಶಕ- ಡಾ.ರಿಚರ್ಡ್ ವಿನ್ಸೆಂಟ್ ಡಿ’ಸೋಜಾ, ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಯೋಜನಾ ನಿರ್ದೇಶಕ- ಟಿ.ಎಚ್.ಎಂ.ಕುಮಾರ್.

ಡಿಪಿಎಆರ್ ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ(ವೆಚ್ಚ ನಿರ್ವಹಣೆ)- ಪಲ್ಲವಿ ಆಕೃತಿ, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಯಮದ ವ್ಯವಸ್ಥಾಪಕ ನಿರ್ದೇಶಕ- ಡಾ.ವಿ.ರಾಮ್ ಪ್ರಸಾದ್ ಮನೋಹರ್, ರಾಯಚೂರು ಜಿಲ್ಲಾಧಿಕಾರಿ- ಆರ್.ವೆಂಕಟೇಶ್ ಕುಮಾರ್.

ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ- ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಕಲಬುರಗಿ ನಗರ ಪಾಲಿಕೆಯ ಆಯುಕ್ತ- ಎಚ್.ವಿ.ದರ್ಶನ್, ಕೋಲಾರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ- ಮುಹಮ್ಮದ್ ಇಕ್ರಾಮುಲ್ಲಾ ಶರೀಫ್, ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ- ಡಾ.ಕೆ.ಆನಂದ್.

ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ- ಪಾಂಡ್ವೆ ರಾಹುಲ್ ತುಕಾರಾಮ್, ಚಾಮರಾಜನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ- ಭೋಯರ್ ಹರ್ಷಲ್ ನಾರಾಯಣರಾವ್, ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ- ಜ್ಞಾನೇಂದ್ರ ಕುಮಾರ್ ಗಂಗವಾರ್.

ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕ- ಡಾ.ಶಿವಶಂಕರ್, ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕ-ಕರೀಗೌಡ ಹಾಗೂ ರಿಯಲ್ ಎಸ್ಟೇಟ್ ರೆಗ್ಯುಲೇಟರಿ ಪ್ರಾಧಿಕಾರ(ರೇರಾ)ದ ಕಾರ್ಯದರ್ಶಿಯನ್ನಾಗಿ ಕೆ.ಎಸ್.ಲತಾ ಕುಮಾರಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಸಿಂಧು ರೂಪೇಶ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿಂಧು ಬಿ.ರೂಪೇಶ್‌ರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಅದೇ ರೀತಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಉಪ ವಿಭಾಗದ ಸಹಾಯಕ ಆಯುಕ್ತೆಯಾಗಿದ್ದ ಪ್ರೀತಿ ಗೆಹ್ಲೋಟ್‌ರನ್ನು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News