ದಿನೇಶ್ ಕಾರ್ತಿಕ್‌ಗೆ ಬಿಸಿಸಿಐ ಶೋಕಾಸ್ ನೋಟಿಸ್

Update: 2019-09-07 18:02 GMT

ಹೊಸದಿಲ್ಲಿ, ಸೆ.7: ಕೆರಿಬಿಯನ್ ಪ್ರೀಮಿಯರ್ ಲೀಗ್(ಸಿಪಿಎಲ್) ಫ್ರಾಂಚೈಸಿ, ಬಾಲಿವುಡ್ ಸೂಪರ್‌ಸ್ಟಾರ್ ಶಾರೂಖ್ ಖಾನ್ ಮಾಲಕತ್ವದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಾರತದ ಆಟಗಾರ ದಿನೇಶ್ ಕಾರ್ತಿಕ್‌ಗೆ ಬಿಸಿಸಿಐ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

ಭಾರತದ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ 34ರ ಹರೆಯದ ಕಾರ್ತಿಕ್ ಟ್ರಿನ್‌ಬಾಗೊ ನೈಟ್ ರೈಡರ್ಸ್‌ನ ಡ್ರೆಸ್ಸಿಂಗ್ ರೂಮ್‌ನಲ್ಲಿ ಕಾಣಿಸಿಕೊಂಡಿದ್ದಲ್ಲದೆ, ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆದ ಸೈಂಟ್ ಕಿಟ್ಸ್ ಹಾಗೂ ನೆವಿಸ್ ವಿರುದ್ಧ ನಡೆದ ಸಿಪಿಎಲ್ ಪಂದ್ಯದಲ್ಲಿ ಹಾಜರಾಗಿದ್ದರು.

‘‘ದಿನೇಶ್ ಕಾರ್ತಿಕ್‌ಗೆ ಬಿಸಿಸಿಐ ಶೋಕಾಸ್ ನೋಟಿಸ್ ನೀಡಿದೆ. ಕಾರ್ತಿಕ್ ಅವರು ಟ್ರಿನ್‌ಬಾಗೊ ನೈಟ್ ರೈಡರ್ಸ್‌ನ ಡ್ರೆಸ್ಸಿಂಗ್ ರೂಮ್‌ನಲ್ಲಿದ್ದ ಫೋಟೊಗಳನ್ನು ನಾವು ಸ್ವೀಕರಿಸಿದ್ದೇವೆ. ನಿಮ್ಮ ಕೇಂದ್ರ ಗುತ್ತಿಗೆಯನ್ನು ಏಕೆ ರದ್ದುಪಡಿಸಬಾರದು ಎಂದು ಕೇಳಿ ಬಿಸಿಸಿಐ ಸಿಇಒ ರಾಹುಲ್ ಜೊಹ್ರಿ ಅವರು ಶೋಕಾಸ್ ನೋಟಿಸ್ ನೀಡಿದ್ದಾರೆ’’ಎಂದು ಹಿರಿಯ ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತದ ಪರ 26 ಟೆಸ್ಟ್, 94 ಏಕದಿನ ಹಾಗೂ 32 ಟಿ-20 ಪಂದ್ಯಗಳನ್ನು ಆಡಿರುವ ಕಾರ್ತಿಕ್ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡದ ಜೆರ್ಸಿ ಧರಿಸಿದ್ದರು. ಬ್ರೆಂಡನ್ ಮೆಕಲಮ್‌ರೊಂದಿಗೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಕಾಣಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News