ಪಿಲಿಕುಳದ ಪ್ರಾಣಿ ಪಾಲಕ ಆತ್ಮಹತ್ಯೆ
Update: 2019-09-08 11:17 IST
ಮಂಗಳೂರು: ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಪ್ರಾಣಿ ಪಾಲಕನಾಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ರವಿವಾರ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಿವಾ ಎಂಬವರ ಪುತ್ರ ಅಶೋಕ (28) ಮೃತರು ಎಂದು ಗುರುತಿಸಲಾಗಿದೆ.
ಅವರು ಸುಮಾರು ಆರು ವರ್ಷಗಳಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಪ್ರಾಣಿ ಪಾಲಕನಾಗಿ ಕೆಲಸ ಮಾಡುತ್ತಿದ್ದರು. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಕಾವೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.