ಪುತ್ತೂರು : ಕೊಟ್ಟಿಗೆ ಕುಸಿದು ಬಿದ್ದು ಮಹಿಳೆ ಮೃತ್ಯು
Update: 2019-09-08 11:19 IST
ಪುತ್ತೂರು: ದನದ ಕೊಟ್ಟಿಗೆ ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಮೇಗಿನ ಪಂಜ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೇಗಿನ ಪಂಜ ನಿವಾಸಿ ದಿ. ಸಂಕಪ್ಪ ಪೂಜಾರಿ ಎಂಬವರ ಪತ್ನಿ ವಾರಿಜ (65)ಮೃತಪಟ್ಟ ಮಹಿಳೆ.
ವಾರಿಜ ಅವರು ಶನಿವಾರ ರಾತ್ರಿ ವೇಳೆ ದನದ ಕೊಟ್ಟಿಗೆಗೆ ಹೋಗಿದ್ದು, ಹಿಂದಿರುಗುತ್ತಿದ್ದ ವೇಳೆ ಕೊಟ್ಟಿಗೆಯ ಗೋಡೆ ಕುಸಿದು ಬಿದ್ದಿತ್ತು. ಈ ಸಂದರ್ಭ ಅವರು ಅದರಡಿಯಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆ ತರಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸುವ ವೇಳೆಯಲ್ಲಿ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.