ಮೋದಿ-ಇಮ್ರಾನ್ ಖಾನ್ ಒಂದೇ ತಾಯಿಯ ಮಕ್ಕಳು: ರಮಾನಾಥ ರೈ
Update: 2019-09-08 12:34 IST
ಮಂಗಳೂರು, ಸೆ. 8: ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಒಂದೇ ತಾಯಿಯ ಮಕ್ಕಳು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಟೀಕಿಸಿದ್ದಾರೆ.
ಮಂಗಳೂರು ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ನರೇಂದ್ರ ಮೋದಿ ಪಾಕಿಸ್ತಾನದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದರೆ, ಅತ್ತ ಪಾಕ್ ಪ್ರಧಾನಿ ಇಮ್ರಾನ್ ಖಾನ್ ತನ್ನ ದೇಶದಲ್ಲಿ ನಡೆಯುವ ಚುನಾವಣೆ ಸಂದರ್ಭ ಭಾರತವನ್ನು ಹೀಯಾಳಿಸುತ್ತಾರೆ ಎಂದರು.
ನರೇಂದ್ರ ಮೋದಿ-ಖಾನ್ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಅವರು ಒಂದೇ ತಾಯಿಯ ಮಕ್ಕಳಿದ್ದಂತೆ. ತಮ್ಮ ಸ್ವಾರ್ಥ ಸಾಧನೆಗಾಗಿ ದೇಶದ ಜನತೆಯನ್ನು ಬಲಿ ಪಡೆಯುತ್ತಿದ್ದಾರೆ. ಇಂಥವರಿಂದ ಅಭಿವೃದ್ಧಿ ಬಯಸುವುದು ಕನಸಿನ ಮಾತಾಗಿದೆ ಎಂದು ರೈ ತಿಳಿಸಿದರು.