ಐಎಫ್‌ಎಸ್ ಅಧಿಕಾರಿ ಅನುಮಾನಸ್ಪದ ಸಾವು

Update: 2019-09-08 13:17 GMT

ಬೆಂಗಳೂರು, ಸೆ.8: ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಐಎಫ್‌ಎಸ್ ಅಧಿಕಾರಿ ಅವತಾರ್ ಸಿಂಗ್(52)ಸಾವನ್ನಪ್ಪಿದ್ದು, ನೇಣು ಬೀಗಿದ ಸ್ಥಿತಿಯಲ್ಲಿ ಅವರ ಮೃತ ದೇಹ ಪತ್ತೆಯಾಗಿದೆ. 

ದೊಡ್ಡಬಳ್ಳಾಪುರ ರಸ್ತೆಯ ಯಲಹಂಕ ಉಪನಗರದಲ್ಲಿರುವ ಪ್ರೇಸ್ಟೀಜ್ ಮೌಂಟ್ ಕಾರ್ಲೋ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಲ್ಲಿ ರವಿವಾರ ಮುಂಜಾನೆ ಅವರ ಮೃತದೇಹ ದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿರುವ ಅವತಾರ್ ಸಿಂಗ್, ರವಿವಾರ ಬೆಳಗ್ಗೆ ವಾಯು ವಿಹಾರಕ್ಕೆ ಹೋಗಿ ಬಂದಿದ್ದರು. ಆದರೆ, ಆ ಬಳಿಕ ಅವರು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ಹರಿಯಾಣ ಮೂಲದವರಾದ ಅವತಾರ್ ಸಿಂಗ್ 1990ರ ಬ್ಯಾಚ್‌ನ ಐಎಫ್‌ಎಸ್ ಅಧಿಕಾರಿಯಾಗಿದ್ದು, ಕಳೆದ ಒಂದು ತಿಂಗಳ ಹಿಂದೆ ಅರಣ್ಯ ಭವನಕ್ಕೆ ವರ್ಗಾವಣೆಯಾಗಿ ಬಂದಿದ್ದರು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News