ಮಂಗಳೂರು : ಬಸ್ ಚಾಲನೆಯಲ್ಲಿ ಮೊಬೈಲ್ ಬಳಕೆ; 5 ಸಾವಿರ ರೂ. ದಂಡ ವಿಧಿಸಿದ ಪೊಲೀಸರು
Update: 2019-09-08 19:59 IST
ಮಂಗಳೂರು, ಸೆ. 8: ಜೋಕಟ್ಟೆಯಲ್ಲಿ ಬಸ್ ಚಾಲನೆ ವೇಳೆ ಮೊಬೈಲ್ ಬಳಸಿ ಸಂಚಾರ ನಿಯಮ ಉಲ್ಲಂಘಿಸಿದ ಚಾಲಕನಿಗೆ ಸಂಚಾರ ಪೊಲೀಸರು 5 ಸಾವಿರ ರೂ. ದಂಡ ವಿಧಿಸಿದ್ದಾರೆ.
ಮಂಗಳೂರು ಉತ್ತರ ಠಾಣೆ ಪೊಲೀಸರು ಜೋಕಟ್ಟೆ ಕ್ರಾಸ್‌ನಲ್ಲಿ ಶನಿವಾರ ಸಂಜೆ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಖಾಸಗಿ ಬಸ್ ಚಲಾಯಿಸುತ್ತಿದ್ದ ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದನೆನ್ನಲಾಗಿದ್ದು, ಬಸ್ ನಿಲ್ಲಿಸಲು ಸೂಚಿಸಿದ ಪೊಲೀಸರು ಚಾಲಕನಿಂದ ದಂಡ ವಸೂಲಿ ಮಾಡಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಮೊತ್ತವನ್ನು ಹೆಚ್ಚಿಸಿ ಜಾರಿ ಮಾಡಿರುವ ಹೊಸ ಮೋಟಾರು ವಾಹನ ಕಾಯ್ದೆ ಮಂಗಳೂರು ನಗರದಲ್ಲಿ ಶನಿವಾರದಿಂದ ಅನುಷ್ಠಾನಕ್ಕೆ ಬಂದಿದೆ. ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದ್ದಲ್ಲಿ ವಾಹನಗಳ ಚಾಲಕರು, ಸವಾರರು ಯಾವುದೇ ಚಿಂತೆಯಿಲ್ಲದೆ ಸಂಚರಿಸಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.