ಮೂಡುಬಿದಿರೆ ತಾಲೂಕು ಮಟ್ಟದ ಕಬಡ್ಡಿ: ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ಶಾಲೆಗೆ ಅವಳಿ ಪ್ರಶಸ್ತಿ

Update: 2019-09-08 14:44 GMT

ಮೂಡುಬಿದಿರೆ : ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ನಡೆದ  ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಮತ್ತು ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ಶಾಲೆಯ ಕ್ರೀಡಾಪಟುಗಳು ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದ್ದಾರೆ.

ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆ (ಪ್ರಥಮ), ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾಂತ್ಯ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ.  ಬಾಲಕಿಯರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಂಟ್ರಾಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. 

ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ ಕಡಂದಲೆ, ಆಳ್ವಾಸ್ ಆಂಗ್ಲ ಮಾಧ್ಯಮ ದ್ವಿತೀಯ, ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ದೈ.ಶಿ.ಶಿ.ಸಂಘದ ಅಧ್ಯಕ್ಷ ವಿನಯಕುಮಾರ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಶ್ವೇತಾ ಜಿ.ಎಸ್, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ವಿನಯ, ಪೊಲೀಸ್ ಇಲಾಖೆಯ ಸಿಬ್ಬಂದಿ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News