ನದಿಯಲ್ಲಿ ಕೊಚ್ಚಿ ಹೋಗಿ ಅಪರಿಚಿತ ಮೃತ್ಯು

Update: 2019-09-08 16:09 GMT

ಕೊಲ್ಲೂರು, ಸೆ.8: ಕೊಲ್ಲೂರು ಗ್ರಾಮದ ಸೌಪರ್ಣಿಕ ನದಿಯಲ್ಲಿ ಸುಮಾರು 60ರಿಂದ 65 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಡೆದಿದೆ.

ಮಲ ವಿಸರ್ಜನೆಗೆಂದು ನದಿಯ ಬಳಿ ಹೋಗಿದ್ದ ಅವರು ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿಕೊಂಡು ಹೋದರೆನ್ನಲಾಗಿದೆ. ಇದರ ಪರಿಣಾಮ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟು ಸೌಪರ್ಣಿಕ ಸ್ನಾನ ಘಟ್ಟದ ಬಳಿಯ ನದಿಯ ಮಧ್ಯದಲ್ಲಿರುವ ಮರದ ಬುಡದಲ್ಲಿ ಸಿಕ್ಕಿಹಾಕಿಕೊಂಡಿದ್ದರು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದರು. ಮೃತರ ಗುರುತು ಈವರೆಗೆ ಪತ್ತೆಯಾಗಿಲ್ಲ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News