ನೆರೆ ಸಂತ್ರಸ್ತರ ನಿರ್ಲಕ್ಷ್ಯ: ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಸೆ.12ಕ್ಕೆ ರಾಜ್ಯಾದ್ಯಂತ ಕಾಂಗ್ರೆಸ್ ಧರಣಿ

Update: 2019-09-09 14:14 GMT

ಬೆಂಗಳೂರು, ಸೆ. 9: ನೆರೆ ಸಂತ್ರಸ್ತರ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರಕಾರದ ನಿರ್ಲಕ್ಷ್ಯ ಖಂಡಿಸಿ ಸೆ.12ರ ಬೆಳಗ್ಗೆ 11ರಿಂದ ಮಧ್ಯಾಹ್ನ 2ಗಂಟೆಯವರೆಗೆ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಧರಣಿ ಸತ್ಯಾಗ್ರಹ ನಡೆಸಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ.

ನೆರೆ ಹಾವಳಿಯಿಂದ ಜೀವ ಮತ್ತು ಅಪಾರ ಆಸ್ತಿ-ಪಾಸ್ತಿ ಹಾನಿ ಉಂಟಾಗಿದೆ. ರಸ್ತೆ, ಸೇತುವೆ, ಶಾಲಾ ಕಟ್ಟಡ, ಮನೆ-ಮಠ ಸೇರಿದಂತೆ ಮೂಲಭೂತ ಸೌಕರ್ಯಗಳು ಕುಸಿದು ಬಿದ್ದಿವೆ. ಹೊಲ-ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನಜೀವನಕ್ಕೆ ತೊಂದರೆ ಉಂಟಾಗಿದೆ.

ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕೇಂದ್ರ ಅಥವಾ ರಾಜ್ಯ ಸರಕಾರವಾಗಲಿ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಇದರಿಂದ ಜನತೆ ಮತ್ತಷ್ಟು ಕಷ್ಟಕ್ಕೆ ಸಿಲುಕುವಂತೆ ಆಗಿದೆ. ಪ್ರಧಾನಿ, ಕೇಂದ್ರ ಗೃಹ ಸಚಿವರು ಹಾಗೂ ಹಣಕಾಸು ಸಚಿವರು ಪರಿಶೀಲನೆ ನಡೆಸಿದರೂ ರಾಷ್ಟ್ರೀಯ ದುರಂತ ಎಂದು ಘೋಷಣೆ ಮಾಡಿಲ್ಲ. ಕೂಡಲೇ ರಾಷ್ಟ್ರೀಯ ದುರಂತವೆಂದು ಘೋಷಣೆ ಮಾಡಿ, ರಾಜ್ಯಕ್ಕೆ ತಕ್ಷಣವೇ ಹಣಕಾಸಿನ ನೆರವು ಘೋಷಣೆ ಮಾಡಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News