ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Update: 2019-09-09 15:12 GMT

ಉಡುಪಿ, ಸೆ.9: 2019-20ನೇ ಸಾಲಿನಲ್ಲಿ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ ಮಂಜೂರು ಮಾಡಲು ಬಿ.ಎಡ್ ಹಾಗೂ ಡಿ.ಎಡ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿ ರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿ ಕೊಂಡು ಭರ್ತಿ ಮಾಡಿ, ಸೂಚಿಸಲಾದ ದಾಖಲಾತಿಗಳೊಂದಿಗೆ ಕಾಲೇಜುಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.20ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2574881ನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News