ಎಟಿಎಂಗೆ ನುಗ್ಗಿ ಹಣ ದೋಚಿದ ದುಷ್ಕರ್ಮಿಗಳು

Update: 2019-09-09 17:18 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.9: ಖಾಸಗಿ ಬ್ಯಾಂಕಿನ ಎಟಿಎಂಗೆ ನುಗ್ಗಿದ ದುಷ್ಕರ್ಮಿಗಳು ನಗದು ದೋಚಿರುವ ಘಟನೆ ಇಲ್ಲಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಬನಶಂಕರಿಯಲ್ಲಿರುವ ಆಕ್ಸಿಸ್ ಬ್ಯಾಂಕ್ ಎಂಟಿಎಂನಲ್ಲಿ ದುಷ್ಕರ್ಮಿಗಳು ಯಾವುದೇ ಸುಳಿವು ಸಿಗದ ರೀತಿಯಲ್ಲಿ 2.89 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ರವಿವಾರ ರಾತ್ರಿ ಬೈಕ್ ಮೂಲಕ ಬಂದಿದ್ದರೆನ್ನಲಾದ ಇಬ್ಬರು ಗ್ಯಾಸ್ ಕಟ್ಟರ್‌ನಿಂದ ಎಟಿಎಂ ಯಂತ್ರವನ್ನು ಒಡೆದು ಹಣ ದೋಚಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಿ, ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News