ಪುಟ್ಟೇನಹಳ್ಳಿ 3 ಅಂತಸ್ತಿನ ಕಟ್ಟಡ ದುರಂತ ಪ್ರಕರಣ: ಮಾಲಕನ ವಿರುದ್ಧ ಮೊಕದ್ದಮೆ ದಾಖಲು

Update: 2019-09-09 18:21 GMT

ಬೆಂಗಳೂರು, ಸೆ.9: ಪುಟ್ಟೇನಹಳ್ಳಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪ್ರಕರಣ ಸಂಬಂಧ ಮಾಲಕ ಗೌತಮ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ ಎಂದು ತಿಳಿದುಬಂದಿದೆ.

ರವಿವಾರ ಸಂಜೆ ನಡೆದ ದುರಂತದಲ್ಲಿ ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ, ಓರ್ವ ಮಹಿಳೆ ಗಾಯಗೊಂಡಿದ್ದರು ಎನ್ನಲಾಗಿದೆ.

30 ವರ್ಷಗಳ ಹಳೆಯ ಈ ಕಟ್ಟಡ, ಕೆಲ ವರ್ಷಗಳ ಹಿಂದೆಯೇ ಗೋಡೆಯಲ್ಲಿ ಬಿರುಕು ಬಿಟ್ಟಿತ್ತು. ಹೀಗಿದ್ದರೂ ಆರೋಪಿ ಗೌತಮ್, ಕಟ್ಟಡದ ಕೊಠಡಿಗಳನ್ನು ಬಾಡಿಗೆಗೆ ನೀಡಿದ್ದ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ತನಿಖೆ ಕೈಗೊಂಡಿದ್ದಾರೆ.

ಘಟನೆ ಹಿನ್ನೆಲೆ: ಬನಶಂಕರಿ ವ್ಯಾಪ್ತಿಯ ಪುಟ್ಟೇನಹಳ್ಳಿ ಸಿಗ್ನಲ್ ಸಾರಕ್ಕಿ ವೃತ್ತದ ಬಳಿ ಮೂರು ಅಂತಸ್ತಿನ ಕಟ್ಟಡ ರವಿವಾರ ಸಂಜೆ ದಿಢೀರ್ ಕುಸಿದು ಬಿದ್ದಿತ್ತು. ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದರು. ಎರಡು ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ 30ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಕಟ್ಟಡದಲ್ಲಿದ್ದ ಎಂಟು ಕುಟುಂಬಗಳನ್ನು ಸುರಕ್ಷಿತವಾಗಿ ಹೊರಗೆ ತರುವಲ್ಲಿ ಯಶಸ್ವಿಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News