ಕಾಶ್ಮೀರದ ಸಮಸ್ಯೆ ಬಗೆಹರಿಸಲು ಸಹಾಯ ಮಾಡಲು ಅಮೆರಿಕ ಸಿದ್ಧ : ಟ್ರಂಪ್

Update: 2019-09-10 07:52 GMT

ನ್ಯೂಯಾರ್ಕ್ , ಸೆ.10: ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಲು ‘ಸಹಾಯ’ ಮಾಡಲು ಸಿದ್ಧ, ಆದರೆ ‘ಮಧ್ಯಸ್ಥಿಕೆ ವಹಿಸುವುದಿಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ "ಎರಡು ವಾರಗಳ ಹಿಂದೆ ಇದ್ದಕ್ಕಿಂತ ಸ್ವಲ್ಪ ಕಡಿಮೆಯಾಗಿದೆ" ಎಂದು ಹೇಳಿದರು. ಫಯೆಟ್ಟೆವಿಲ್ಲೆ ನಡೆದ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದರು.

ಸುದ್ದಿಗಾರರ  ಪ್ರಶ್ನೆಯೊಂದಕ್ಕೆ ಉತ್ತರಿಸಿದ ಟ್ರಂಪ್ "ನಾನು ಎರಡೂ ದೇಶಗಳೊಂದಿಗೆ ಚೆನ್ನಾಗಿ ಹೊಂದಿಕೊಳ್ಳುತ್ತೇನೆ. ಅವರು ಬಯಸಿದರೆ ನಾನು ಸಹಾಯ ಮಾಡಲು ಸಿದ್ಧನಿದ್ದೇನೆ. ‘ಭಾರತ-ಪಾಕಿಸ್ತಾನ ನಡುವಿನ ಎಲ್ಲ ಸಮಸ್ಯೆಗಳು ದ್ವಿಪಕ್ಷೀಯವಾಗಿವೆ’ 

ಭಾರತವು ಅಮೆರಿಕದ ಸಹಾಯವನ್ನು ಬಯಸುವುದಿಲ್ಲ, ಕಾಶ್ಮೀರ ಮತ್ತು ಪಾಕಿಸ್ತಾನದೊಂದಿಗಿನ ಎಲ್ಲಾ ಇತರ ವಿವಾದಗಳನ್ನು ದ್ವಿಪಕ್ಷೀಯವಾಗಿ ಪರಿಹರಿಸಬಹುದು . ಪಾಕಿಸ್ತಾನ ಭಯೋತ್ಪಾದನಾ ಚಟುವಟಿಕೆಗಳಿಗೆ ಕಡಿವಾಣ ಹಾಕದೆ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಪ್ರಯತ್ನಿಸಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News